ಭಾರೀ ಮಳೆಗೆ ಗೋಡೆ ಕುಸಿದು ೩ ಸಾವು

khushihost
ಭಾರೀ ಮಳೆಗೆ ಗೋಡೆ ಕುಸಿದು ೩ ಸಾವು

ರಾಯಚೂರು : ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ.

ಬೆಳಗಿನ ಜಾವ ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಪರಮೇಶ (45), ಜಯಮ್ಮ (39) ಹಾಗೂ ಪುತ್ರ ಭರತ (5) ಸಾವನ್ನಪ್ಪಿದ ದುರ್ದೈವಿಗಳು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article