ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

khushihost
ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಬೇಡ ಎಂದಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ ಪ್ಲಾಟ್​​​ನಲ್ಲಿ ನಡೆದಿದೆ.

ಕಾಂಗ್ರೆಸ್ ಯುವ ಮುಖಂಡ ತೌಸಿಫ ಲಕ್ಕುಂಡಿ ಹಲ್ಲೆಗೊಳಗಾದ ವ್ಯಕ್ತಿ. ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ನಗರದಲ್ಲಿ ಮನೆ ಮಾಡಿದ್ದ ತೌಸಿಫ ಮನೆಯ ಬಳಿ ಪದೇ ಪದೇ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್​ ಎಂಬುವರ ನಡುವೆ ವಾಗ್ವಾದ ನಡೆದಿತ್ತು ಎಂದು ಆರೋಪಿಸಲಾಗಿದೆ. ಇದನ್ನೇ ಹಗೆ ಸಾಧಿಸಿದ ಇಸ್ಮಾಯಿಲ್ ನಿನ್ನೆ ರಾತ್ರಿ ತೌಸಿಫ್​​ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ಘಟನೆಯಲ್ಲಿ ಗಾಯಗೊಂಡ ತೌಸಿಫ್​ ಅವರನ್ನು ಚಿಕಿತ್ಸೆಗಾಗಿ ಕಿಮ್ಸ​​ಗೆ ದಾಖಲಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಹಳೆ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share This Article