ಕ್ಷುಲ್ಲಕ ಜಗಳ; ಇಬ್ಬರಿಗೆ ಚಾಕು ಇರಿತ 

khushihost
ಕ್ಷುಲ್ಲಕ ಜಗಳ; ಇಬ್ಬರಿಗೆ ಚಾಕು ಇರಿತ 

ರಾಮದುರ್ಗ: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದು, ಓರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.

ಬೈಕ್ ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಒಂದು ಕೋಮಿನ ಐದಕ್ಕೂ ಅಧಿಕ ಯುವಕರು ಚಾಕು, ರಾಡ್, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ ಬಂಡಿವಡ್ಡರ್‌ಗೆ ಚಾಕು ಇರಿಯಲಾಗಿದೆ. ರವಿ ಬಂಡಿವಡ್ಡರ ಎಂಬ ಯುವಕನ ತಲೆಗೆ ರಾಡ್​ನಿಂದ ಹಲ್ಲೆ ಮಾಡಲಾಗಿದೆ.

ಜಗಳ ಬಿಡಿಸಲು ಹೋದ ನಂಜುಡಿ ಸಾಬಣ್ಣ ಬಂಡಿವಡ್ಡರ ಎಂಬುವರ ಮೇಲೆಯೂ ಹಲ್ಲೆ ಮಾಡಲಾಗಿದೆ. ಗಾಯಾಳುಗಳಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article