ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ

khushihost
ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ಬೆಲೆ ನಿಗದಿಪಡಿಸುವಂತೆ ಚೆನ್ನಮ್ಮ ವೃತ್ತದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.

ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ ಬೀದಿಗಿಳಿದ ರೈತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ನಗರದ ಅಶೋಕ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ತಮಗೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಬಳಿಕ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆಗಮಿಸದ ಹಿನ್ನೆಲೆ, ರೈತರು ಕಾಂಪೌಂಡ್ ಹಾರಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಸ್ಥಗಿತಗೊಂಡು ಶಾಲಾ ಕಾಲೇಜುಗಳ ಮಕ್ಕಳು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸಿದರು.

Share This Article