ಪತ್ನಿಯ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

khushihost
ಪತ್ನಿಯ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

ಧಾರವಾಡ: ಹೆಂಡತಿ ಕೊಲೆ ಮಾಡಿದ ಪತಿ ಮಹಾಶಯನೊಬ್ಬ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.

ಶ್ರೀದೇವಿ ರಾಮಾಪುರ ಕೊಲೆಯಾದ ದುರ್ದೈವಿ. ರಾಜು ರಾಮಾಪುರ ಎಂಬಾತನೇ ಪತ್ನಿ ಕೊಂದು ಸಾವಿಗೆ ಶರಣಾದ ಪತಿ‌. ಪತ್ನಿ ಶ್ರೀದೇವಿಯನ್ನು ಹೊಲದಲ್ಲೇ ಕೊಡಲಿಯಿಂದ ಕೊಚ್ಚಿ ರಾಜು ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಬಳಿಕ ಹೊಲದಲ್ಲೇ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article