ಮತ್ತಿಬ್ಬರು ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : ಮುರುಘಾ ಶ್ರೀಗಳ ವಿರುದ್ಧ ದೂರು ದಾಖಲು 

khushihost
ಮತ್ತಿಬ್ಬರು ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : ಮುರುಘಾ ಶ್ರೀಗಳ ವಿರುದ್ಧ ದೂರು ದಾಖಲು 

ಚಿತ್ರದುರ್ಗ : ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘ ರಾಜೇಂದ್ರ ಶರಣರ ವಿರುದ್ಧ ಮತ್ತಿಬ್ಬರು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಮುರುಘಾ ಮಠದ ಶರಣರ ವಿರುದ್ಧ 12 ಹಾಗೂ 14 ವರ್ಷದ ಬಾಲಕಿಯರು ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ನೀಡಿದ್ದಾರೆ. ಮಠದಲ್ಲಿ‌ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಿ ಶ್ರೀಗಳ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅದರಂತೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ.

Share This Article