ಪೋಕ್ಸೋ ಆರೋಪಿ ಸಾವಿಗೆ ಶರಣು

khushihost
ಪೋಕ್ಸೋ ಆರೋಪಿ ಸಾವಿಗೆ ಶರಣು

ಭಟ್ಕಳ, ೧೪-
ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬರ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿರುವಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಹಡೀಲ್ ಸುಬ್ಬತ್ತಿಯ 64 ವರ್ಷದ ನಾರಾಯಣ ನಾಯ್ಕ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇವರ ವಿರುದ್ಧ 2014ರಲ್ಲಿ ಭಟ್ಕಳ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನಡೆದಿತ್ತು. ಇದರ ಮಧ್ಯೆ ನಾರಾಯಣ ನಾಯ್ಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Share This Article