ಮಳೆ ಹಾನಿಗೆ 124 ಕೋಟಿ ರೂ. ಪರಿಹಾರ ಬಿಡುಗಡೆ

khushihost
ಮಳೆ ಹಾನಿಗೆ 124 ಕೋಟಿ ರೂ. ಪರಿಹಾರ ಬಿಡುಗಡೆ

ಬೆಂಗಳೂರು: 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿಗೆ ಪರಿಹಾರವಾಗಿ ರಾಜ್ಯ ಸರ್ಕಾರ 124 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಕಂದಾಯ ಇಲಾಖೆ ಮೂಲಕ ಜಿಲ್ಲಾಧಿಕಾರಿಗಳ, ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ನೆರೆ, ಪ್ರವಾಹ ಕೂಡ ಉಂಟಾಗಿದ್ದು, ಅನೇಕ ಪ್ರಮಾಣದಲ್ಲಿ ಹಾನಿಯಾಗಿದೆ. ಹೀಗಾಗಿ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆಂದು ರಾಜ್ಯ ಸರ್ಕಾರ 124 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯುವಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share This Article