ರಮೇಶ ಜಾರಕಿಹೊಳಿ, ಈಶ್ವರಪ್ಪಗೆ ನೋಟೀಸ

khushihost
ರಮೇಶ ಜಾರಕಿಹೊಳಿ, ಈಶ್ವರಪ್ಪಗೆ ನೋಟೀಸ

ಶಿರಸಿ: ವಿಧಾನಸಭೆ ಅಧಿವೇಶನಕ್ಕೆ ಗೈರು ಹಾಜರಾದ  ರಮೇಶ ಜಾರಕಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ಮತ್ತು ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.

ಅನುಮತಿ ಹಾಗೂ ಸೂಕ್ತ ಕಾರಣ ನೀಡದೇ ಅಧಿವೇಶನಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ನೋಟಿಸ್ ನೀಡಿರುವುದಾಗಿ ವಿಧಾನಸಭೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೆ ಸಚಿವರು, ಶಾಸಕರು ಲಿಖಿತವಾಗಿ ಅಥವಾ ಮೌಖಿಕವಾಗಿ ಸೂಕ್ತ ಕಾರಣ ನೀಡುತ್ತಾರೆ. ಆದರೆ, ರಮೇಶ ಜಾರಕಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ಮಾಹಿತಿ ನೀಡದೆ ಗೈರುಹಾಜರಾಗಿದ್ದು, ಈ ಬಗ್ಗೆ ಸದನದ ಒಪ್ಪಿಗೆ ಪಡೆದು ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.

Share This Article