ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ ? ಇಲ್ಲಿದೆ ವಿವರ

khushihost
ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ ? ಇಲ್ಲಿದೆ ವಿವರ

ಬೆಂಗಳೂರು, ೧೭- ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದಂತೆ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಜನ ಹೈರಾಣಾಗಿ ಹೋಗಿದ್ದಾರೆ. ಆದರೆ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಇಂದು ಬಾಗಲಕೋಟ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ರವಿವಾರವೂ ಸಹ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಕೆಲವೆಡೆ ಕೃಷಿ ಭೂಮಿಗೆ ನೀರು ನುಗ್ಗಿರುವ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ಅಲ್ಲದೇ ಜೀವ ಹಾನಿಯೂ ಸಂಭವಿಸಿದ್ದು, ಮನೆ ಕುಸಿತದಂತಹ ಘಟನೆಗಳು ಸಹ ನಡೆದಿದೆ.

Share This Article