ಮಲಗಿದ್ದ ವೃದ್ಧೆಯನ್ನು ನಾಯಿಗಳು ಕಚ್ಚಿ ತಿಂದ ಭಯಾನಕ ಘಟನೆ

khushihost
ಮಲಗಿದ್ದ ವೃದ್ಧೆಯನ್ನು ನಾಯಿಗಳು ಕಚ್ಚಿ ತಿಂದ ಭಯಾನಕ ಘಟನೆ

ಕಲಬುರಗಿ : ರಸ್ತೆ ಬದಿ ಮಲಗಿದ್ದ ವೃದ್ಧೆಯನ್ನು ನಾಯಿಗಳು ಕಚ್ಚಿ ತಿಂದ ಮನಕುಲುಕುವ ಭಯಾನಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ನಡೆದಿದೆ.

ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ಸಮೀಪ ರಸ್ತೆ ಬದಿ ಮಲಗಿದ್ದ ವೃದ್ಧೆಯನ್ನು ನಾಯಿಗಳು ಕಚ್ಚಿ ತಿಂದಿವೆ. ವೃದ್ಧೆ ಮಾನಸಿಕ ಅಸ್ವಸ್ಥಳಾಗಿದ್ದು, ಸಂಬಂಧಿಕರು ಆಕೆಯನ್ನು ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ಬಿಟ್ಟು ಹೋಗಿದ್ದರು.

ವೃದ್ಧೆಗೆ ಗೂಡ್ಸ​ ವಾಹನ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವೃದ್ಧೆಯನ್ನು ಗೂಡ್ಸ​ ವಾಹನ ಚಾಲಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದನು. ಗಾಯಾಳು ವೃದ್ಧೆ ಕಳೆದ ರಾತ್ರಿ ರಸ್ತೆ ಬದಿ ಮಲಗಿದಾಗ ನಾಯಿಗಳು ವೃದ್ದೆಯನ್ನು ತಿಂದಿವೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ .

Share This Article