ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಮಂದಿ ಆರೋಪಿಗಳ ಗಡಿಪಾರು

khushihost
ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಮಂದಿ ಆರೋಪಿಗಳ ಗಡಿಪಾರು

ಬೆಳಗಾವಿ: ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಮಂದಿ ಆರೋಪಿಗಳನ್ನ ಗಡಿಪಾರು ಮಾಡಲಾಗಿ, ಇವರ ವಿರುದ್ಧ 132 ಪ್ರಕರಣಗಳಿವೆ ಎಂದು ಬೆಳಗಾವಿ ಎಸ್​​ಪಿ ಡಾ.ಸಂಜೀವ ಪಾಟೀಲ ಮಾಹಿತಿ ನೀಡಿದರು.

ಅಥಣಿ ಉಪವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ ಬಾಗಡಿ, ರಡ್ಡೇರಹಟ್ಟಿ ಗ್ರಾಮದ ಸದಾಶಿವ ಗೊಡಮಾಲೆ, ಉಗಾರ ಬಿ.ಕೆ.ಗ್ರಾಮದ ಮಹಾದೇವ ಕಾಂಬಳೆ, ಕೋಹಳಿ ಗ್ರಾಮದ ರವಿ ಶಿಂಗೆ, ಹಾಲಳ್ಳಿ ಗ್ರಾಮದ ಕಾಶಪ್ಪ ಕಾರಿಕೊಳ್ಳ, ಕಕಮರಿ ಗ್ರಾಮದ ಪ್ರದೀಪ ಕರಡಿ, ಕುಡಚಿ ಗ್ರಾಮದ ಅಲಿಮುರ್ತುಜಾ ಚಮನಮಲೀಕ, ಸಾಹೇಬಹುಸೇನ್ ಚಮನಮಲೀಕ್, ನಜೀರ ಹುಸೇನ ತಾಂಬೋಳಿ, ಮೊರಬ ಗ್ರಾಮದ ಬಾಬಾಸಾಬ ನದಾಫ, ಚಿಂಚಲಿ ಗ್ರಾಮದ ಲಕ್ಷ್ಮಣ ಪೋಳ, ಅಲ್ತಾಫ ಹುಸೇನ ಮೇವಗಾರ ಆರೋಪಿಗಳನ್ನು ಗಡಿಪಾರು ಮಾಡಲಾಗಿದೆ.

Share This Article