ಸಾರಿಗೆ ಬಸ್ ಪಲ್ಟಿ; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

khushihost
ಸಾರಿಗೆ ಬಸ್ ಪಲ್ಟಿ; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕಲಬುರ್ಗಿ: ಸಾರಿಗೆ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಕಾಗಿಣಾ ಸೇತುವೆ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಏಕಾಏಕಿ ಸೇತುವೆ ಬಳಿ ಪಲ್ಟಿಯಾಗಿ ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭಿಸಿಲ್ಲ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸರ್ಕಾರಿ ಬಸ್ ಜೇವರ್ಗಿಯಿಂದ ಚಿತ್ತಾಪುರಕ್ಕೆ ತೆರಳುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article