ರಾಜ್ಯದಲ್ಲಿ ಐದು ಹೊಸ ವಿಮಾನ ನಿಲ್ದಾಣ : ಸಚಿವ ನಿರಾಣಿ 

khushihost
ರಾಜ್ಯದಲ್ಲಿ ಐದು ಹೊಸ ವಿಮಾನ ನಿಲ್ದಾಣ : ಸಚಿವ ನಿರಾಣಿ 

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 5 ವಿಮಾನ ನಿಲ್ದಾಣ ನಿರ್ಮಾಣ ಆಗಲಿದ್ದು, ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿಯಾಗಿವೆ ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಹೂಡಿಕೆದಾರರ ಇನ್ವೆಸ್ಟ್ ಕರ್ನಾಟಕ-2022 ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಸಮಾವೇಶದಿಂದ ರಾಜ್ಯದಲ್ಲಿ ಅಂದಾಜು 9.82 ಲಕ್ಷ ಕೋಟಿ ಹೂಡಿಕೆಯಾಗಲಿದೆ, ರಾಜ್ಯದಲ್ಲಿ ಹೊಸದಾಗಿ 5 ವಿಮಾನ ನಿಲ್ದಾಣ ನಿರ್ಮಾಣ ಆಗಲಿದ್ದು, ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿಯಾಗಿವೆ ಎಂದರು.

ಈ ಬಾರಿ ಶೇ 90 ರಷ್ಟು ರಾಜ್ಯದ ಇತರೆ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯಾಗಲಿದೆ. ಇಂಧನ ಕ್ಷೇತ್ರದಲ್ಲಿ ಶೇ 38, ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಶೇ 33, ಮೂಲಸೌಕರ್ಯ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಶೇ 9 ಹೂಡಿಕೆಯಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಬಂದರುಗಳ ಅಭಿವೃದ್ಧಿಗೂ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಬೇಕಾದ ಜಾಗವನ್ನು ರೈತರಿಂದ ಖರೀದಿ ಮಾಡಲಾಗುತ್ತದೆ. ಮುಂದಿನ ಬಾರಿಯೂ ಕೂಡ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ, ಬಂಡವಾಳ ಹೂಡಿಕೆ ಒಪ್ಪಂದ ನಾವೇ ಜಾರಿ ಮಾಡುತ್ತೇವೆ ಎಂದು ಹೇಳಿದರು.

 

Share This Article