ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿಗೆ ಮನವಿ

khushihost
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿಗೆ ಮನವಿ

ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಾಕಷ್ಟು ಅಡಚಣೆಗಳ ನಂತರ ಗಣೇಶೋತ್ಸವ ಆಚರಿಸಲಾಗಿದೆ.

ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್  ಹಾಗೂ ಸಮತಾ ಸೈನಿಕದಳ ಕಾರ್ಯಕರ್ತರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿತ್ತು. ಇದೀಗ ಟಿಪ್ಪು ಜಯಂತಿ ಆಚರಣೆಗೂ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ. ಜೊತೆಗೆ ಮೈದಾನಲ್ಲಿ ಜಮಾಯಿಸಿದ್ದ ಅಭಿಮಾನಿಗಳು  ಅಸಾದುದ್ದೀನ ಓವೈಸಿ ಪರ ಜೈ ಘೋಷಣೆ ಹಾಕಿದ್ದಾರೆ.

Share This Article