70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ 

khushihost
70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ 

ಕಲಬುರಗಿ : 70 ವರ್ಷದ ವೃದ್ದೆ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಂತೋಷ (28) ಎಂಬಾತ ಈ ಕೃತ್ಯ ಎಸಗಿದ್ದು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿಕೊಂಡು ಬಂದ ವೃದ್ದೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ, ವೃದ್ದೆಯನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Share This Article