ಹಿಂದೂ ಪದ ಅಶ್ಲೀಲ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ

khushihost
ಹಿಂದೂ ಪದ ಅಶ್ಲೀಲ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ

ನವದೆಹಲಿ : ಹಿಂದೂ ಪದವು ಅಶ್ಲೀಲ ಅರ್ಥ ಹೊಂದಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಸತೀಶ ಜಾರಕಿಹೊಳಿ ಅವರ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೆವಾಲ ಅವರು ಸತೀಶ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ್ದಾರೆ. ಹಿಂದೂ ಧರ್ಮ ಎಂಬುದು ಒಂದು ಜೀವನ ವಿಧಾನವಾಗಿದ್ದು ಕಾಂಗ್ರೆಸ್ ಪ್ರತಿಯೊಂದು ಧರ್ಮವನ್ನು ಗೌರವಿಸಿಕೊಂಡು ರಾಷ್ಟ್ರ ನಿರ್ಮಾಣ ಮಾಡಿದೆ ಎಂದು ಸುರ್ಜೆವಾಲಾ ಟ್ವೀಟ್ ಖಂಡಿಸಿದ್ದಾರೆ.

ಹಿಂದೂ ಶಬ್ದದ ಬಗ್ಗೆ ಸತೀಶ ಜಾರಕಿಹೊಳಿ ಅವರ ಹೇಳಿಕೆ ಅತ್ಯಂತ ದುರದೃಷ್ಟಕರ ಮತ್ತು ತಿರಸ್ಕಾರಾರ್ಹವಾಗಿದೆ. ಕಾಂಗ್ರೆಸ್ ಪಕ್ಷವು ಜಾರಕಿಹೊಳಿ ಹೇಳಿಕೆಯನ್ನು ಖಂಡಿಸುತ್ತದೆ ಎಂದು ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ.

Share This Article