ಆರ್ಥಿಕ ದುರ್ಬಲರಿಗೆ ಮೀಸಲಾತಿ ಕಲ್ಪಿಸಲು ಸಂವಿಧಾನದಡಿ ಅವಕಾಶ ಇಲ್ಲ

khushihost
ಆರ್ಥಿಕ ದುರ್ಬಲರಿಗೆ ಮೀಸಲಾತಿ ಕಲ್ಪಿಸಲು ಸಂವಿಧಾನದಡಿ ಅವಕಾಶ ಇಲ್ಲ

ಹುಬ್ಬಳ್ಳಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ರಷ್ಟು ಮೀಸಲಾತಿ ಕುರಿತಾಗಿ ಸುಪ್ರೀಮ ಕೋರ್ಟ ನೀಡಿರುವ ತೀರ್ಪನ್ನು ಇನ್ನೂ ನೋಡಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ನನಗೆ ತಿಳಿದ ಪ್ರಕಾರ ಸಂವಿಧಾನದ ಆರ್ಟಿಕಲ್ 15 & 16ರಡಿ ಆರ್ಥಿಕ ದುರ್ಬಲರಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮರೊಂದಿಗೆ ಮಾತನಾಡಿದ ಅವರು, ಸಾಮಾಜಿಕವಾಗಿ ಹಿಂದುಳಿದ ಮತ್ತು ಅಸ್ಪೃಶ್ಯತೆ ಹಾಗೂ ಅಸಮಾನತೆ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಮಾತ್ರ ಮೀಸಲು ನೀಡಬಹುದು ಎಂಬುದನ್ನು ಸಂವಿಧಾನ ಹೇಳುತ್ತದೆ ಎಂದರು.

ಜನರು ಈ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್​ಗೆ ಅಧಿಕಾರ ನೀಡುವ ಸಂಕಲ್ಪ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ. ಜನರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್​ಗಳಿಗೆ ಬೀಗಹಾಕಿ ಕಟ್ಟಿ ಹಾಕಲು ಬಿಜೆಪಿಯವರು ವಿಫಲ ಯತ್ನ ಮಾಡುತ್ತಿದ್ದಾರೆಂದು ಆರೋಪಿಸಿದರು.

Share This Article