ಪಿಎಸ್‌ಐ ಪರೀಕ್ಷೆ ಅಕ್ರಮ : ಎಡಿಜಿಪಿ ಅಮೃತ ಪೌಲ್ ಮನೆ ಮೇಲೆ ಇಡಿ ದಾಳಿ

khushihost
ಪಿಎಸ್‌ಐ ಪರೀಕ್ಷೆ ಅಕ್ರಮ : ಎಡಿಜಿಪಿ ಅಮೃತ ಪೌಲ್ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: 545 ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 11 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಬಂಧಿತ ಮಾಜಿ‌ ಎಡಿಜಿಪಿ‌ ಅಮೃತ ಪೌಲ್, ಡಿವೈಎಸ್ಪಿ ಶಾಂತಕುಮಾರ ಸೇರಿ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಪ್ರಮುಖ ದಾಖಲೆಗಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಮನಿ ಲಾಂಡರಿಂಗ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಡಿ ದಾಳಿಯಾಗಿದೆ. ಸಹಕಾರ ನಗರದಲ್ಲಿರುವ ಅಮೃತ್ ಪಾಲ್ ನಿವಾಸ, ಆಡುಗೋಡಿ ಟೆಕ್ನಿಕಲ್ ಸೆಲ್​ನಲ್ಲಿರುವ ಶಾಂತಕುಮಾ​ರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Share This Article