ಸಾಲದವರ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಒಂದೇ ಕುಟುಂಬದ ಐವರು ಆತ್ಮಹತ್ಯೆ

khushihost
ಸಾಲದವರ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಒಂದೇ ಕುಟುಂಬದ ಐವರು ಆತ್ಮಹತ್ಯೆ

ಬಿಹಾರ : ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಾದ ಪಟ್ಟಣದ ಆದರ್ಶ ನಗರದಲ್ಲಿ ನಡೆದಿದೆ.

ಗಂಭೀರ ಸ್ಥಿತಿಯಲ್ಲಿದ್ದ ಓರ್ವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಸಾಲದ ಸುಳಿಯಲ್ಲಿ ಸಿಲುಕಿತ್ತು. ಸಾಲ ವಸೂಲಾತಿ ಕಿರುಕುಳದಿಂದ ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ತೆಗೆದುಕೊಂಡಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇದಾರನಾಥ ಗುಪ್ತಾ ಎಂಬವರ ಕುಟುಂಬದ 6 ಸದಸ್ಯರು ಸಾವಿಗೀಡಾಗಿದ್ದಾರೆ. ಇವರಲ್ಲಿ ಒಬ್ಬ ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದು ಇಲ್ಲಿನ ಜಿಲ್ಲಾ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾರೋ ಒಬ್ಬರಿಂದ ಸಾಲ ಪಡೆದಿದ್ದು, ಅದನ್ನು ತೀರಿಸುವಂತೆ ಒತ್ತಡ ಬರುತ್ತಿತ್ತು. ಕುಟುಂಬದವರೆಲ್ಲರೂ ಬಾಡಿಗೆ ಮನೆಯಲ್ಲಿ ವಿಷ ಸೇವಿಸದೆ ನವಾದ ನಗರದಿಂದ ದೂರದಲ್ಲಿರುವ ಮಜಾರ್‌ಗೆ ತೆರಳಿ ಸಾವಿಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದರು.

Share This Article