ಪ್ರವಾಸಕ್ಕೆ ಹೊರಟ ಶಾಲಾ ಬಸ್ ಪಲ್ಟಿ : ಮಹಿಳೆ ಸಾವು, 8 ಜನರಿಗೆ ಗಾಯ 

khushihost
ಪ್ರವಾಸಕ್ಕೆ ಹೊರಟ ಶಾಲಾ ಬಸ್ ಪಲ್ಟಿ : ಮಹಿಳೆ ಸಾವು, 8 ಜನರಿಗೆ ಗಾಯ 

ಕಾರವಾರ: ಶಾಲಾ ಬಸ್​ ಪಲ್ಟಿಯಾಗಿ 60 ವರ್ಷದ ಮಹಿಳೆ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅರಬೈಲ್​ ಘಟ್ಟದ ಬಳಿ ನಡೆದಿದೆ.

ಘಟನೆಯಲ್ಲಿ ಶಾಲಾ ಬಸ್ ಚಾಲಕ ಸೇರಿದಂತೆ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆ ರಜೆ ಹಿನ್ನೆಲೆ ಪ್ರವಾಸ ಕೈಗೊಳ್ಳಲಾಗಿತ್ತು. ಹುಬ್ಬಳಿಯಿಂದ ಅಂಕೋಲಾ‌ ಮಾರ್ಗವಾಗಿ ಪ್ರವಾಸಕ್ಕೆ ತೆರಳುತ್ತಿದ್ದ ರಾಣಿಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರಕ್ಕೆ ಸೇರಿದ್ದ ಬಸ್, ರಾಣೆಬೆನ್ನೂರು ಸಿದ್ಧಾರೂಢ ನಗರದಿಂದ ಶಿರಸಿಯತ್ತ ಬರುತ್ತಿದ್ದಾಗ ಬನವಾಸಿಯ ಬುಗುಡಿಕೊಪ್ಪದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಶಿರಸಿ- ಹಾವೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ದುರ್ಘಟನೆಯಲ್ಲಿ ಕಸ್ತೂರಮ್ಮ ಎಂಬ 60 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ 8 ಮಂದಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಸ್ವರೂಪವಾದ ಗಾಯಗಳಾಗಿದ್ದು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article