ಶೌಚಾಲಯಕ್ಕೆ ತೆರಳುವ ಮಹಿಳೆಯರ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಜನ 

khushihost
ಶೌಚಾಲಯಕ್ಕೆ ತೆರಳುವ ಮಹಿಳೆಯರ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಜನ 

ಕೊಪ್ಪಳ: ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯನ್ನು ಸ್ಥಳಿಯ ನಿವಾಸಿಗಳು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದ ಇಂದಿರಾ ನಗರದಲ್ಲಿ ಘಟನೆ ನಡೆದಿದೆ.

ಮರದ ಮರೆಯಲ್ಲಿ ನಿಂತು ಮಹಿಳೆಯರ ವಿಡಿಯೋ ಮಾಡುವುದನ್ನು ಗಮನಿಸಿದ್ದ ಮಹಿಳೆಯೊಬ್ಬರು ಸ್ಥಳೀಯರಿಗೆ ತಿಳಿಸಿದ್ದಾರೆ.

ಆಗ ಸ್ಥಳೀಯರು ಆತನನ್ನು ಹಿಡಿದು ಥಳಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article