ಸತೀಶ ಜಾರಕಿಹೊಳಿ ಕ್ಷೇತ್ರದಲ್ಲಿ ನಾಳೆ ಹಿಂದೂ ಸಮಾವೇಶ 

khushihost
ಸತೀಶ ಜಾರಕಿಹೊಳಿ ಕ್ಷೇತ್ರದಲ್ಲಿ ನಾಳೆ ಹಿಂದೂ ಸಮಾವೇಶ 

ಯಮಕನಮರಡಿ : ಹಿಂದೂ ಪದದ ಅರ್ಥದ ಕುರಿತು ವ್ಯಾಖ್ಯಾನ ನೀಡಿದ ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಪ್ರಕರಣವನ್ನು ತನ್ನ ರಾಜಕೀಯ ಲಾಭಕಾಗಿ ಬಳಸಿಕೊಳ್ಳವ ಯತ್ನದ ಭಾಗವಾಗಿ ಬಿಜೆಪಿ ವಿಧಾನಸಭಾ ಕ್ಷೇತ್ರ ಯಮಕನಮರಡಿಯಲ್ಲಿ ಹಿಂದೂ ಸಂಘಟನೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.

ಬುಧವಾರ ಸಂಜೆ 5 ಘಂಟೆಗೆ ನಾನು ಹಿಂದೂ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯ ಭಾಷಣಕಾರರಾಗಿ ಯುವ ಬ್ರಿಗೇಡ್ ಮುಖ್ಯಸ್ಥ, ಚಕ್ರವರ್ತಿ ಸೂಲಿಬೆಲೆ ಆಗಮಿಸುತ್ತಿದ್ದಾರೆ.

ಕಳೆದ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿಯವರಿಂದ ಸೋಲಿಸಲ್ಪಟ್ಟಿದ್ದ ಬಿಜೆಪಿಯ ಮಾರುತಿ ಅಷ್ಟಗಿ ಅವರು ಹಿಂದೂಗಳ ಭಾವನೆಗೆ ದಕ್ಕೆ ಉಂಟು ಮಾಡಿರುವ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಹಿಂದೂತ್ವದ ಶಕ್ತಿ ಸಾಮರ್ಥ್ಯ ತೋರಿಸುವ ನಿಟ್ಟಿನಲ್ಲಿ ತಾವು ಕಾರ್ಯಕ್ರಮ ಏರ್ಪಡಿಸಲಾಗಿರುವುದಾಗಿ ತಿಳಿಸಿದ್ದಾರೆ.

Share This Article