ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

khushihost
ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.

15 ವರ್ಷದ ಅಪ್ರಾಪ್ತಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆರೋಪಿ ಅತ್ಯಾಚಾರವೆಸಗಿದ್ದಾನೆ. ಕಾಮುಕ ವೇಣುಗೋಪಾಲ್ ನನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ಸಂತ್ರಸ್ತ ಬಾಲಕಿಯ ಕುಟುಂಬ ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬಂದು ವಾಸವಾಗಿತ್ತು. ಈ ವೇಳೆ ಆರೋಪಿ ಬಾಲಕಿಯ ಮೇಲೆ ಕಣ್ಣಿಟ್ಟು, ಆಕೆಯನ್ನು ನಂಬಿಸಿ ಕರೆದೊಯ್ದು ಹೇಯ ಕೃತ್ಯವೆಸಗಿದ್ದಾನೆ.

Share This Article