ವಿದ್ಯಾರ್ಥಿನಿ ಜೊತೆ ಮಾತನಾಡಿದಕ್ಕೆ ಅಪಹರಿಸಿ ಹಲ್ಲೆ : ಇಬ್ಬರ ಬಂಧನ

khushihost
ವಿದ್ಯಾರ್ಥಿನಿ ಜೊತೆ ಮಾತನಾಡಿದಕ್ಕೆ ಅಪಹರಿಸಿ ಹಲ್ಲೆ : ಇಬ್ಬರ ಬಂಧನ

ಹುಬ್ಬಳ್ಳಿ: ವಿದ್ಯಾರ್ಥಿನಿಯನ್ನು ಮಾತನಾಡಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿರುವ ಘಟನೆ ಗೋಕುಲ‌ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಕ್ಷಯ ಪಾರ್ಕ‌ನ ಖಾಸಗಿ ಕಾಲೇಜ್​ನಲ್ಲಿ ವಿದ್ಯಾರ್ಥಿಯೊಬ್ಬ ಹುಡುಗಿಯನ್ನು ಮಾತನಾಡಿಸಿದ್ದಾನೆ ಎನ್ನಲಾಗಿದೆ. ಈ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ. ಕೊನೆಗೆ ವಿದ್ಯಾರ್ಥಿಯನ್ನು ಅಪಹರಿಸಿದ ನಾಲ್ವರು ಯುವಕರು, ಕುಸುಗಲ್ಲ ರಸ್ತೆಯ ಹಿಂದೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಕೇಶ್ವಾಪುರ ತಳವಾರ ಓಣಿಯ ಮಹಮ್ಮದ ಗೌಸ್, ಶಬರಿನಗರದ ಸೋಹೆಲ್ ಎಂಬವರು​ ಬಂಧಿತರು. ಪ್ರತೀಕ ಮತ್ತು ಸೌರಭ ಪರಾರಿಯಾಗಿದ್ದಾರೆ. ಪರಾರಿಯಾದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಗೋಕುಲ್ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article