ಎಲ್ಲಾ ನೇರ ನೇಮಕಾತಿ, ಮುಂಬಡ್ತಿ ತಡೆ ಹಿಡಿದ ರಾಜ್ಯ ಸರ್ಕಾರ 

khushihost
ಎಲ್ಲಾ ನೇರ ನೇಮಕಾತಿ, ಮುಂಬಡ್ತಿ ತಡೆ ಹಿಡಿದ ರಾಜ್ಯ ಸರ್ಕಾರ 

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿಯನ್ನು ಹೆಚ್ಚಿಸಲಾಗಿತ್ತು. ಈ ಮೀಸಲಾತಿ ಹೆಚ್ಚಳದ ಅನ್ವಯ ನೇರ ನೇಮಕಾತಿ, ಮುಂಬಡ್ತಿಯಲ್ಲಿ ಅವಕಾಶ ನೀಡುವ ಸಲುವಾಗಿ ಈಗ ಎಲ್ಲಾ ನೇರ ನೇಮಕಾತಿ ಮತ್ತು ಮುಂಬಡ್ತಿಗೆ ತಡೆ ನೀಡಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಅವರು ಹೊರಡಿಸಿರುವಂತ ಟಿಪ್ಪಣಿಯಲ್ಲಿ ಕರ್ನಾಟಕ ಅನುಸೂಚಿತ ಜಾತಿ, ಪಂಡಗಳಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಸಂಬಂಧ ಆದೇಶವನ್ನು ದಿನಾಂಕ 01-11-2022ರಿಂದ ಜಾರಿಗೆ ಬರುವಂತೆ ಹೊರಡಿಸಲಾಗಿದೆ ಎಂದಿದ್ದಾರೆ.

ಈ ಆದೇಶದಂತೆ ನೇರ ನೇಮಕಾತಿ ಅಥವಾ ಪದೋನ್ನತಿಯಲ್ಲಿ ಅನುಸೂಚಿತ ಜಾತಿ, ಪಂಗಡಗಳಿಗೆ ಸೇರಿದ ವ್ಯಕ್ತಿಗಳಿಗೆ ಹೆಚ್ಚಿಸಲಾಗಿರುವ ಮೀಸಲಾತಿಯನ್ನು ಜಾರಿಗೊಳಿಸಲು ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಇದೀಗ ಚಾಲ್ತಿಯಲ್ಲಿರುವಂತ ರೋಸ್ಟರ್ ಬಿಂದು ಪ್ರಕ್ರಿಯ ಹಿನ್ನೆಲೆಯಲ್ಲಿ ಅಂತಿಮಗೊಂಡು ಅಧಿಕೃತವಾಗಿ ಪ್ರಕಟವಾಗುವ ವರೆಗೆ ಎಲ್ಲಾ ನೇರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದೆ. ಈ ಮೀಸಲಾತಿ ಅನ್ವಯವಾಗುವ ವೃಂದಗಳಿಗೆ ನೀಡಲಾಗುವ ಮುಂಬಡ್ತಿಯನ್ನು ಇಲಾಖಾ ಮುಂಬಡ್ತಿ ಸಮಿತಿ ಸಭೆಯನ್ನು ಆಯೋಜಿಸಬಾರದು ಎಂಬುದಾಗಿ ಸೂಚಿಸಿದ್ದಾರೆ.

Share This Article