ಮದ್ಯ ಅಂಗಡಿಗಳ ಸ್ಥಳಾಂತರಕ್ಕೆ ಗ್ರಾಮಸ್ಥರ ಒತ್ತಾಯ

khushihost
ಮದ್ಯ ಅಂಗಡಿಗಳ ಸ್ಥಳಾಂತರಕ್ಕೆ ಗ್ರಾಮಸ್ಥರ ಒತ್ತಾಯ

ಬೆಳಗಾವಿ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ನಿತೇಶ ಪಾಟೀಲರಿಗೆ ಮದ್ಯ ಮಾರಾಟ ಅಂಗಡಿಯನ್ನು ಬಂದ್ ಮಾಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಗ್ರಾಮಸ್ಥರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು, ಸದ್ಯಕ್ಕೆ ಮದ್ಯದ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದ್ದು, ಸೂಕ್ತ ಪರಿಶೀಲನೆ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ನೂರಾರು ಮಹಿಳೆಯರು ಹಾಗೂ ಗ್ರಾಮಸ್ಥರು ಗ್ರಾಮದಲ್ಲಿ ಇರುವ ಮದ್ಯದಂಗಡಿಗಳನ್ನು ಊರಿನ ಹೊರಗೆ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿಕೊಂಡರು.

ಬಳಿಕ ಜಿಲ್ಲಾಧಿಕಾರಿಗಳು ಬಸವೇಶ್ವರ ವೃತ್ತದಲ್ಲಿ ಇರುವ ಆನಂದ ಬ್ರ್ಯಾಂಡಿ ಅಂಗಡಿ ಮತ್ತು ಲಕ್ಷ್ಮೀ ಬಾರ್ ಮತ್ತು ರೆಸ್ಟೋರೆಂಟ್ ಗೆ ಸ್ವತಃ ತೆರಳಿ ಪರಿಶೀಲನೆ ಕೈಗೊಂಡರು.

ಕೆಲವು ಮದ್ಯದ ಬಾಟಲ್ ಗಳನ್ನು ತೆಗೆದುಕೊಂಡು ಅವುಗಳ ಗುಣಮಟ್ಟ ಪರಿಶೀಲಿಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದರು. ಜಿಪಂ ಸಿಇಓ ದರ್ಶನ್, ಉಪ ವಿಭಾಗಾಧಿಕಾರಿ ಶಶಿಧರ ಬಗಲಿ ಮತ್ತಿತರರು ಉಪಸ್ಥಿತರಿದ್ದರು

Share This Article