ಓದುವ ಒತ್ತಡ : ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

khushihost
ಓದುವ ಒತ್ತಡ : ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ವಿಜಯಪುರ : ನೇಣು ಬಿಗಿದ ಸ್ಥಿತಿಯಲ್ಲಿ ಪಿಯು ವಿದ್ಯಾರ್ಥಿಯ ಶವ ಪತ್ತೆಯಾದ ಘಟನೆ ತಾಲೂಕಿನ ನಾಗರಬೆಟ್ಟದ ಖಾಸಗಿ ವಸತಿ ಕಾಲೇಜಿನಲ್ಲಿ ನಡೆದಿದೆ.

ಅಜಯಕುಮಾರ ನುಚ್ಚಿ (18) ಮೃತ ವಿದ್ಯಾರ್ಥಿ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈತ, ಓದುವ ಒತ್ತಡ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಾಗಿದೆ.

Share This Article