ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ 

khushihost
ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ 

ಹುಬ್ಬಳ್ಳಿ: ಹಳೇ ದ್ವೇಷ ಹಾಗು ಕುಡಿದ ಮತ್ತಿನಲ್ಲಿ ದುಷ್ಕರ್ಮಿಗಳು ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ನಗರದ ಕಸಾಯಿ ಮೋಹಲ್ಲಾದಲ್ಲಿ ಕೃತ್ಯ ನಡೆದಿದೆ.

ಸದರಸೋಪಾ ನಿವಾಸಿ ಜಾಫರ ಇಮ್ಮಿಯಾಜ ದಡೆಸುರ ಕೊಲೆಯಾದ ಯುವಕ. ಚಾಕು ಇರಿತದಿಂದ ಗಂಭೀರ ಗಾಯಗೊಂಡು ಬಿದ್ದಿದ್ದ ಜಾಫರ‌ನನ್ನು ಆತನ ಸ್ನೇಹಿತರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article