ಹೆಲಿಕಾಫ್ಟರನಲ್ಲಿ ಬಂದ ಸಿದ್ದರಾಮಯ್ಯ ನೋಡಲು ನೂಕುನುಗ್ಗಲು; ಲಾಠಿ ಪ್ರಹಾರ 

khushihost
ಹೆಲಿಕಾಫ್ಟರನಲ್ಲಿ ಬಂದ ಸಿದ್ದರಾಮಯ್ಯ ನೋಡಲು ನೂಕುನುಗ್ಗಲು; ಲಾಠಿ ಪ್ರಹಾರ 

ಕೊಪ್ಪಳ : ಮದುವೆ ಮನೆಯಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿದ್ದು, ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಕೊಪ್ಪಳದ ವನಬಳ್ಳಾರಿ ಗ್ರಾಮದ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿ, ಮದುವೆ ಮನೆಯ ವೇದಿಕೆಯನ್ನೇ ಬಳಸಿಕೊಂಡು ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ.

ಕೊಪ್ಪಳದ ಕನಕಗಿರಿಗೆ ಶಿವರಾಜ ತಂಗಡಗಿ, ಕುಷ್ಟಗಿ ಕ್ಷೇತ್ರಕ್ಕೆ ಅಮರೇಗೌಡ ಭಯ್ಯಾಪೂರ, ಯಲಬುರ್ಗಾಕ್ಕೆ ಬಸವರಾಜ ರಾಯರೆಡ್ಡಿ, ಕೊಪ್ಪಳಕ್ಕೆ ರಾಘವೇಂದ್ರ ಹಿಟ್ನಾಳ ಹಾಗೂ ಗಂಗಾವತಿ ಕ್ಷೇತ್ರದಿಂದ ಇಕಬಾಲ ಅನ್ಸಾರಿಗೆ ಈ ಈ ಬಾರಿ ಚುನಾವಣೆಯಲ್ಲಿ ಮತ ನೀಡುವಂತೆ ಸಿದ್ದರಾಮಯ್ಯ ಜನರಿಗೆ ಮನವಿ ಮಾಡಿದ್ದಾರೆ.

ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ನೋಡೋಕೆ ನೂಕುನುಗ್ಗಲು ಸಂಭವಿಸಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.

Share This Article