ಕಮಿಷನ್ ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಕಮಿಷನ್ : ಬೊಮ್ಮಾಯಿ

khushihost
ಕಮಿಷನ್ ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಕಮಿಷನ್ : ಬೊಮ್ಮಾಯಿ

ಹರಿಹರ: ಕಮಿಷನ್ ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಕಮಿಷನ್, ಎಲ್ಲದರಲ್ಲೂ ಕಾಂಗ್ರೆಸ್ ಸರ್ಕಾರ ಕಮಿಷನ್ ಹೊಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಹರಿಹರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜನ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರ ಹೊರಗೆ ಬರುತ್ತದೆ ಎಂದು ಲೋಕಾಯುಕ್ತ ಬಂದ್ ಮಾಡಿ ಎಸಿಬಿ ಪ್ರಾರಂಭಿಸಿದರು. ಎಸಿಬಿಯಲ್ಲಿ ಕಾಂಗ್ರೆಸ್ ವಿರುದ್ಧದ ದೂರುಗಳ ಬಗ್ಗೆ ಬಿ ರಿಪೋರ್ಟ್ ಹಾಕಿಸಿಕೊಂಡು ಪ್ರಕರಣ ಮುಚ್ಚಿ ಹಾಕಿ ತಾವು ಸ್ವಚ್ಛರು ಎಂದು ಬಿಂಬಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ  ಬೊಮ್ಮಾಯಿ ವಾಗ್ದಾಳಿ ನಡೆಸಿ ವ್ಯಂಗ್ಯವಾಡಿದರು.

ಕಾಂಗ್ರೆಸ್ ದೇಶದಲ್ಲಿ ಮುಳುಗುತ್ತಿರುವ ಹಡಗು. 2023 ರಲ್ಲಿ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮುಳುಗಲಿದೆ. ಅದಕ್ಕೆ ಬೂತ್ ಮಟ್ಟದಲ್ಲಿ, ಮಂಡಲ ಮಟ್ಟದಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಕೈಮುಗಿದು ಕೇಳಿಕೊಳ್ಳುತ್ತೇನೆ, ಜನ ನಮಗೆ ಅಧಿಕಾರ ಕೊಡಲು ಸಿದ್ಧರಿದ್ದಾರೆ, ಕಾರ್ಯಕರ್ತರು ನಮ್ಮ ಜೊತೆ ಕೈಜೋಡಿಸಬೇಕು ಎಂದರು.

Share This Article