ಮತದಾರರ ಮಾಹಿತಿ ಅಕ್ರಮದಲ್ಲಿ ಮೋದಿ ಸರ್ಕಾರವೂ ಭಾಗಿ : ಸುರ್ಜೆವಾಲ 

khushihost
ಮತದಾರರ ಮಾಹಿತಿ ಅಕ್ರಮದಲ್ಲಿ ಮೋದಿ ಸರ್ಕಾರವೂ ಭಾಗಿ : ಸುರ್ಜೆವಾಲ 

ಬೆಂಗಳೂರು: ಮತದಾರರ ಮಾಹಿತಿ ಕಳವು ಹಗರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತ್ರವಲ್ಲದೇ ಕೇಂದ್ರದ ನರೇಂದ್ರ ಮೋದಿ ಸರ್ಕಾರವೂ ಭಾಗಿಯಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಆರೋಪಿಸಿದರು.

ನಗರದ ವರ್ತೂರು ಬಳಿ ಮಾತನಾಡಿದ ಅವರು, ಕೇವಲ ಮತದಾರರ ಮಾಹಿತಿ ಕಳವು ಮಾತ್ರವಲ್ಲ ದೇಶ ಹಾಗೂ ರಾಜ್ಯದ ಹಣ ಲೂಟಿ ಈ ಸರ್ಕಾರ ಮಾಡುತ್ತಿವೆ.

ಕೇಂದ್ರ ಸರ್ಕಾರದ ಸಿಟಿಜನ್ ಸರ್ವೀಸಸ್ ಸೆಂಟರ್ ನಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದ್ದು, ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ ಅವರಿಗೂ ಪಾವತಿಯಾಗಿದೆ. ಜನರ ಹಣ ಲೂಟಿ ಮಾಡಿ, ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದರು. ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಬೊಮ್ಮಾಯಿ ಅವರು ಪ್ರಮುಖ ಕಿಂಗ್ ಪಿನ್ ಆಗಿದ್ದು, ಈ ವಿಚಾರವಾಗಿ ಜನರು ಹಾಗೂ ಮಾಧ್ಯಮಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಅವರು ಉತ್ತರ ನೀಡುತ್ತಿಲ್ಲ. ಕೇಂದ್ರ ಸರ್ಕಾರದ ಸಂಸ್ಥೆಯಿಂದ ಆರೋಪಿ ಹಾಗೂ ಆತನ ಆಪ್ತರ ಖಾತೆಗಳಿಗೆ ಹಣ ವರ್ಗಾವಣೆ ಹೇಗಾಯಿತು. ಇದೆಲ್ಲದರ ಸತ್ಯಾಂಶ ಹೊರಬರಲು ಹೈಕೋರ್ಟ ಮುಖ್ಯ ನ್ಯಾಯಮೂರ್ತಿ ಅವರ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

Share This Article