ಮಹಾರಾಷ್ಟ್ರ ಕನ್ನಡಿಗರ ಅಳಲು ಕೇಳಲು ಇಬ್ಬರು ಸಚಿವರನ್ನು ಮಹಾರಾಷ್ಟ್ರಕ್ಕೆ ಕಳುಹಿಸಿ

khushihost
ಮಹಾರಾಷ್ಟ್ರ ಕನ್ನಡಿಗರ ಅಳಲು ಕೇಳಲು ಇಬ್ಬರು ಸಚಿವರನ್ನು ಮಹಾರಾಷ್ಟ್ರಕ್ಕೆ ಕಳುಹಿಸಿ

ಬೆಳಗಾವಿ : ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜೆ ದೇಸಾಯಿ ಅವರು ಇದೇ ಶನಿವಾರ ಡಿಸೆಂಬರ 3 ರಂದು ಬೆಳಗಾವಿಗೆ ಆಗಮಿಸಿ ಇಲ್ಲಿನ ಮಹಾರಾಷ್ಟ್ರಪರ ಸಂಘಟನೆ ಎಂಇಎಸ್ ಮತ್ತು ಶಿವಸೇನೆಯೊಂದಿಗೆ ಚರ್ಚೆ ನಡೆಸುವ ಹಿನ್ನೆಲೆಯಲ್ಲಿ ಕರ್ನಾಟಕ ಸಹ ಇಬ್ಬರು ಹಿರಿಯ ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ದಕ್ಷಿಣ ಸೊಲ್ಲಾಪುರ ಮತ್ತು ಪಂಢರಪುರ ಪ್ರದೇಶಗಳಿಗೆ ಕಳುಹಿಸಿ ಅಲ್ಲಿನ ಕನ್ನಡಿರೊಂದಿಗೆ ಮಾತುಕತೆ ನಡೆಸಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಆಗ್ರಹಿಸಿದೆ.

ಮಂಗಳವಾರ ಮುಖ್ಯಮಂತ್ರಿ ಬಸವರಾಜ
ಬೊಮ್ಮಾಯಿ ಅವರಿಗೆ ಪತ್ರ ಬರೆದು ಈ ಕುರಿತು
ಒತ್ತಾಯಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.

Share This Article