ರಕ್ಷಣಾ ಇಲಾಖೆ ವಶದಲ್ಲಿರುವ ಭೂಮಿ ಹಸ್ತಾಂತರಿಸುವಂತೆ ಬೊಮ್ಮಾಯಿ ಮನವಿ

khushihost
ರಕ್ಷಣಾ ಇಲಾಖೆ ವಶದಲ್ಲಿರುವ ಭೂಮಿ ಹಸ್ತಾಂತರಿಸುವಂತೆ ಬೊಮ್ಮಾಯಿ ಮನವಿ

ಬೆಂಗಳೂರು: ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ವೇಳೆ ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿಯಲ್ಲಿರುವ  732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಈ ಭೂಮಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಸಲ್ಲಿಸಿದರು.

Share This Article