ಎಸ್‌ ಎಸ್‌ ಎಲ್‌ ಸಿ ಹಿಡಿದು ಯುನಿವರ್ಸಿಟಿ ವರೆಗಿನ ನಕಲಿ ಮಾರ್ಕ್ಸ ಕಾರ್ಡ ತಯಾರಿಸುತ್ತಿದ್ದ ದೊಡ್ಡ ಜಾಲ ಪತ್ತೆ

khushihost
ಎಸ್‌ ಎಸ್‌ ಎಲ್‌ ಸಿ ಹಿಡಿದು ಯುನಿವರ್ಸಿಟಿ ವರೆಗಿನ ನಕಲಿ ಮಾರ್ಕ್ಸ ಕಾರ್ಡ ತಯಾರಿಸುತ್ತಿದ್ದ ದೊಡ್ಡ ಜಾಲ ಪತ್ತೆ

ಬೆಂಗಳೂರು: ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ.

ದೇಶದ 29 ವಿವಿಗಳ ಅಂಕಪಟ್ಟಿ ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಗುಂಪನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ 1500ಕ್ಕೂ ಹೆಚ್ಚು ನಕಲಿ ಮಾರ್ಕ್ಸ ಕಾರ್ಡ, 80 ನಕಲಿ ಸೀಲ್, 30 ಹಾಲೋಗ್ರಾಂ ಸ್ಟಿಕ್ಕರ್, 8 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಹಾಗೂ ಪಿಯು ಬೋರ್ಡ್, ಯುಪಿಯ ಸಿ.ವಿ. ರಾಮನ್ ವಿವಿ, ದೆಹಲಿಯ ಸೆಕೆಂಡರಿ ಬೋರ್ಡ್, ಮೇಘಾಲಯದ ವಿಲಿಯಂ ಕ್ಯಾರಿ ಯುನಿವರ್ಸಿಟಿ ಸೇರಿದಂತೆ ದೇಶದ 29 ವಿವಿಗಳ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿಸಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Share This Article