ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ

khushihost
ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವೆ ಬಂದ್ ಆಗಿದ್ದ ಸಾರಿಗೆ ಬಸ್ ಸಂಚಾರ ಇಂದಿನಿಂದ ಪುನರಾರಂಭವಾಗಿದೆ.

ಕರ್ನಾಟಕದ ಬೆಳಗಾವಿ ಗಡಿ ಹಾಗೂ ಪುಣೆಯಲ್ಲಿ ಮಹಾರಾಷ್ಟ್ರ ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ, ಎರಡೂ ರಾಜ್ಯಗಳ ಬಸ್, ಕಾರು ಸೇರಿದಂತೆ ವಾಹನಗಳ ಮೇಲೆ ಕಲ್ಲು ತೂರಾಟ, ಮಸಿ ಬಳಿದ ಪ್ರಕರಣಗಳ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಮಹಾರಾಷ್ಟ್ರ ಹಾಗೂ ಬೆಳಗಾವಿ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಬಸ್ ಗಳಿಲ್ಲದೇ ಸಾರ್ವಜನಿಕರು ಕಳೆದ ಎರಡು ದಿನಗಳಿಂದ ಪರದಾಟ ನಡೆಸಿದ್ದರು. ಇದೀಗ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಆರಂಭವಾಗಿದೆ. ಕರ್ನಾಟಕದ ಬೆಳಗಾವಿ, ಚಿಕ್ಕೋಡಿಯಿಂದ ಮಹಾರಾಷ್ಟ್ರದ ನಾಸಿಕ್, ಪುಣೆ, ಮುಂಬೈ, ಮಿರಜ, ಔರಂಗಾಬಾದ, ಸಿಂಧದುರ್ಗ ಸೇರಿದಂತೆ ಹಲವೆಡೆ ಕೆ ಎಸ್ ಆರ್ ಟಿಸಿ, ಸೇರಿದಂತೆ 400ಕ್ಕೂ ಹೆಚ್ಚು ಬಸ್ ಗಳು ಸಂಚಾರ ಆರಂಭಿಸಿವೆ.

Share This Article