ಟಿಪ್ಪು ಸುಲ್ತಾನ ಪ್ರತಿಮೆ ನಿರ್ಮಿಸುವುದಾಗಿ ಹೇಳಿದ ಕಾಂಗ್ರೆಸ್ ಶಾಸಕ ತನ್ವೀರ ಸೇಠ್ ಗೆ ಜೀವ ಬೆದರಿಕೆ, ದೂರು ದಾಖಲು

khushihost
ಟಿಪ್ಪು ಸುಲ್ತಾನ ಪ್ರತಿಮೆ ನಿರ್ಮಿಸುವುದಾಗಿ ಹೇಳಿದ ಕಾಂಗ್ರೆಸ್ ಶಾಸಕ ತನ್ವೀರ ಸೇಠ್ ಗೆ ಜೀವ ಬೆದರಿಕೆ, ದೂರು ದಾಖಲು

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ವೀರ್ ಸೇಠ್ ಅವರಿಗೆ ಹಿಂದೂ ಕಾರ್ಯಕರ್ತ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಹಾಸನ ಜಿಲ್ಲೆಯ ಸಕಲೇಶಪುರದ ರಘು ವಿರುದ್ಧ ದೂರು ದಾಖಲಿಸಲಾಗಿದೆ.

ಮೈಸೂರಿನ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು, ಟಿಪ್ಪುಸುಲ್ತಾನ್ ಪ್ರತಿಮೆ ಸ್ಥಾಪನೆ ಮಾಡುವುದಾಗಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಹಿಂಪಡೆದು ಹಿಂದೂ ಸಮಾಜದ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ 6X3 ಅಡಿ ಫಿಕ್ಸ್ ಎಂದು ವಿಡಿಯೋ ಮೂಲಕ ರಘು ಬೆದರಿಕೆ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಬೆದರಿಕೆ ಹಾಕಿರುವ ರಘು ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ. ಮೈಸೂರು ಬೀಡಿ ಮಜ್ದೂರು ಅಸೋಸಿಯೇಷನ್ ಕಾರ್ಯದರ್ಶಿ ಕೆ.ಸಿ. ಶೌಕತ್ ಪಾಷಾ ಅವರು ಉದಯಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Share This Article