ಹಿಂದೂ ಧರ್ಮಕ್ಕೆ ಮತಾಂತರಗೊಂಡು 18ರ ತರುಣನ ಜೊತೆ 3ನೇ ಮದುವೆಯಾದ 3 ಮಕ್ಕಳ ತಾಯಿ!

khushihost
ಹಿಂದೂ ಧರ್ಮಕ್ಕೆ ಮತಾಂತರಗೊಂಡು 18ರ ತರುಣನ ಜೊತೆ 3ನೇ ಮದುವೆಯಾದ 3 ಮಕ್ಕಳ ತಾಯಿ!

ಲಖನೌ : ಮೂರು ಮಕ್ಕಳ ತಾಯಿ ತನ್ನ ಎರಡನೆ ಮದುವೆಗೆ ಗುಡ್ ಬೈ ಹೇಳಿ ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಮೂರನೇ ಮದುವೆಯಾಗಿರುವ ಘಟನೆ ಉತ್ತರ ಪ್ರದೇಶ ಅಮ್ರೋಹಾದಲ್ಲಿ ನಡೆದಿದೆ.

ಶಬನಮ್ ಹೆಸರಿನ  ಆ ಮಹಿಳೆ ಈಗ ಶಿವಾನಿ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದಾಳೆ. ಇದು ಆಕೆಗೆ ಮೂರನೇ ಮದುವೆ. ಶಿವಾನಿಯು ಪಕ್ಕದ ಮನೆಯ 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಆಕೆ ಸಂಬಂಧ ಬೆಳೆಸಿಕೊಂಡಿದ್ದಳು. ಆಕೆ ಎರಡನೇ ಗಂಡನಿಗೆ ವಿಚ್ಛೇದನ ನೀಡಿ ಮೂವರು ಹೆಣ್ಣು ಮಕ್ಕಳನ್ನು ಆತನ ಬಳಿ ಬಿಟ್ಟು, ಸ್ಥಳೀಯ ದೇವಸ್ಥಾನವೊಂದರಲ್ಲಿ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ.

ಕೆಲವು ದಿನಗಳ ಹಿಂದೆ ಎರಡೂ ಕುಟುಂಬಗಳ ನಡುವೆ ಪಂಚಾಯಿತಿ ನಡೆದಿತ್ತು, ಮಹಿಳೆ ವಯಸ್ಕಳಾಗಿರುವುದರಿಂದ ಅವಳು ಬಯಸಿದ ಸ್ಥಳದಲ್ಲಿ ವಾಸಿಸಲು ಸ್ವತಂತ್ರಳು ಎಂದು ನಿರ್ಧರಿಸಲಾಯಿತು. ಶಿವಾನಿ ತನ್ನ ಸ್ವಂತ ಇಚ್ಛೆಯಿಂದ ಮದುವೆಯಾಗಿದ್ದು, ತನ್ನ ನಿರ್ಧಾರದಿಂದ ತೃಪ್ತಳಾಗಿದ್ದಾಳೆ ಎಂದು ಹೇಳಿದಳು. ವಿದ್ಯಾರ್ಥಿ ಕೂಡ ಅದನ್ನೇ ಹೇಳಿದ್ದು, ತಾವು ಸಂತೋಷವಾಗಿದ್ದೇವೆ ಮತ್ತು ಹಸ್ತಕ್ಷೇಪ ಬಯಸುವುದಿಲ್ಲ ಎಂದು ಹೇಳಿದ್ದಾನೆ

ಇದಕ್ಕೂ ಮೊದಲು, ಶಬನಮ್ ಅಲಿಗಡದಲ್ಲಿ ವಿವಾಹವಾಗಿದ್ದಳು, ಆದರೆ ನಂತರ ದಂಪತಿ ವಿಚ್ಛೇದನ ಪಡೆದರು. ಅವರ ಎರಡನೇ ಮದುವೆ ಸುಮಾರು ಎಂಟು ವರ್ಷಗಳ ಹಿಂದೆ ನಡೆದಿತ್ತು. ಒಂದು ವರ್ಷದ ಹಿಂದೆ, ಅವರ ಪತಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಅಂಗವಿಕಲರಾದರು. ಅದರ ನಂತರ ಆಕೆಯ ಸಂಬಂಧ ಬಾಲಕನೊಂದಿಗೆ ಶುರುವಾಗಿ ಮದುವೆಯಲ್ಲಿ ಕೊನೆಗೊಂಡಿದೆ.

Share This Article