ಬಸ್ ಡಿಕ್ಕಿ : ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆ ಸಾವು 

khushihost
ಬಸ್ ಡಿಕ್ಕಿ : ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆ ಸಾವು 

ಬಾಗಲಕೋಟ: ಕೆಎಸ್‌ಆರ್ ಟಿಸಿ ಬಸ್ ನಿಯಂತ್ರಣ ತಪ್ಪಿದ ಪರಿಣಾಮ ಗಂಡ ಮತ್ತು ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆ ಮೃತಪಟ್ಟ ದುರ್ಘಟನೆ ಜಿಲ್ಲೆಯ ಬಾದಾಮಿ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ.

ಬಸ್ ಪಾಟಾ ಕಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹೋಗ್ತಿದ್ದ ವೆಂಕುಬಾಯಿ ಚವ್ಹಾಣ್ (35) ಎಂಬ ಮಹಿಳೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಬಾದಾಮಿಯಿಂದ ಕೆರೂರು ಕಡೆಗೆ ಹೋಗುತ್ತಿತ್ತು.

ಮೃತ ವೆಂಕುಬಾಯಿ ತನ್ನ ಗಂಡ ಹಾಗೂ ಮಗುವಿನೊಂದಿಗೆ ಕರೆಮ್ಮ ದೇವಸ್ಥಾನಕ್ಕೆ ಹೋಗ್ತಿದ್ದಾಗ ಡಿಕ್ಕಿಯಾಗಿದೆ. ಅದೃಷ್ಟವಶಾತ್ ವೆಂಕುಬಾಯಿ ಗಂಡ ಹಾಗೂ ಮಗುವಿಗೆ ಯಾವುದೇ ಗಾಯಗಳಾಗಿಲ್ಲ. ಬಾದಾಮಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share This Article