ಶೀಘ್ರದಲ್ಲಿ ಮೀಸಲಾತಿ ಹೆಚ್ಚಳ ಕುರಿತು ಸರ್ವಪಕ್ಷಗಳ ಸಭೆ 

khushihost
ಶೀಘ್ರದಲ್ಲಿ ಮೀಸಲಾತಿ ಹೆಚ್ಚಳ ಕುರಿತು ಸರ್ವಪಕ್ಷಗಳ ಸಭೆ 

ಬೆಂಗಳೂರು: ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ಶೀಘ್ರದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಸದನದಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 7.5ಕ್ಕೆ ಹೆಚ್ಚಿಸುವುದು ಸೇರಿದಂತೆ ವಾಲ್ಮೀಕಿ ನಾಯಕ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನಡೆಸುತ್ತಿರುವ ಸತ್ಯಾಗ್ರಹವನ್ನು ವಾಪಸ್ಸು ತೆಗೆದುಕೊಳ್ಳುವುದಕ್ಕೆ ಮನವಿ ಮಾಡಿದರು. ಇದೇ ವೇಳೆ ಸಭಾಪತಿ ಕಾಗೇರಿಯವರು ವಿಧಾನಸಭೆಯ ಅಧಿವೇಶನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದರು.

Share This Article