ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಪುಟ್ಟ ಬಾಲಕನ ಗುಪ್ತಾಂಗ ಸುಟ್ಟ ಅಂಗನವಾಡಿ ಶಿಕ್ಷಕಿ 

khushihost
ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಪುಟ್ಟ ಬಾಲಕನ ಗುಪ್ತಾಂಗ ಸುಟ್ಟ ಅಂಗನವಾಡಿ ಶಿಕ್ಷಕಿ 

ತುಮಕೂರು : ಪದೇ ಪದೇ ಚಡ್ಡಿಯಲ್ಲಿ ಬಾಲಕನೊಬ್ಬ ಮೂತ್ರ ಮಾಡಿಕೊಳ್ಳುತ್ತಿದ್ದ ಅನ್ನುವ ಕಾರಣಕ್ಕೆ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗವನ್ನು ಬೆಂಕಿ ಕಡ್ಡಿಯಿಂದ ಸುಟ್ಟಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.

ಮೂರುವರೆ ವರ್ಷದ ಬಾಲಕ ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ. ಹೀಗಾಗಿ ವಿದ್ಯಾರ್ಥಿಯನ್ನು ಗದರಿಸಲು ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗವನ್ನು ಬೆಂಕಿ ಕಡ್ಡಿಯಿಂದ ಸುಟ್ಟಿದ್ದಾರೆ. ಬಾಲಕನ ಗುಪ್ತಾಂಗ ಮತ್ತು ತೊಡೆಯ ಬಳಿ ಸುಟ್ಟ ಗಾಯಗಳಾಗಿವೆ.

ಈ ಬಗ್ಗೆ ಸುದ್ದಿ ತಿಳಿದ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಹಾಗೂ ಸಹಾಯಕಿಗೆ ನೋಟಿಸ್ ನೀಡಿ ತಪ್ಪೊಪ್ಪಿಗೆ ಪತ್ರ ಪಡೆದಿದ್ದಾರೆ.

Share This Article