ಜನಸಾಮಾನ್ಯರಿಗೆ ವಿದ್ಯುತ್ ದರ ಏರಿಕೆ ರೂಪದಲ್ಲಿ ಮತ್ತೊಂದು ಪ್ರಹಾರ

khushihost
ಜನಸಾಮಾನ್ಯರಿಗೆ ವಿದ್ಯುತ್ ದರ ಏರಿಕೆ ರೂಪದಲ್ಲಿ ಮತ್ತೊಂದು ಪ್ರಹಾರ

ಬೆಂಗಳೂರು  : ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಪ್ರಹಾರ ನಡೆಸಲು ತೀರ್ಮಾನ ಮಾಡಲಾಗಿದ್ದು ಇಂಧನ ಹೊಂದಾಣಿಕೆ ಶುಲ್ಕ ಹೆಚ್ಚಾಗಲಿದೆ. ಅಕ್ಟೋಬರ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಬರೆ ಬೀಳಲಿದೆ.

ಈಗ ಅಕ್ಟೋಬರನಲ್ಲಿ ಇಂಧನ ವೆಚ್ಚ ಶುಲ್ಕದ ಬಿಸಿ ಗ್ರಾಹಕರಿಗೆ ಮುಟ್ಟಲಿದ್ದು, ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆಯಾಗಲಿದೆ. ಮುಂದಿನ ವರ್ಷ ಮಾರ್ಚ ವರೆಗೆ ಈ ದರ ಇರಲಿದೆ. ಕಲ್ಲಿದ್ದಲಿನ ದರ ಏರಿಕೆಯಾದರೇ ದರ ಏರಿಕೆ ಅನಿವಾರ್ಯ ಎಂದು ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಇಂಧನ ಹೊಂದಾಣಿಕೆ ಶುಲ್ಕವನ್ನು ಮೂರು ತಿಂಗಳಿಗೊಮ್ಮೆ ಕೆಇ ಆರ್ ಸಿಗೆ ಪರಿಶೀಲನೆ ಮಾಡುವಂತೆ ಬೆಸ್ಕಾಂ ಮನವಿ ಕೂಡ ಮಾಡಿದೆ. ಆದರೆ, ಸದ್ಯ ಆರು ತಿಂಗಳಿಗೆ ಅನ್ವಯವಾಗುವಂತೆ ದರ ಏರಿಕೆಯಾಗಲಿದೆ.

Share This Article