ಶಿಕ್ಷಕರ ನೇಮಕಾತಿ ಹಗರಣ : ಮತ್ತೊಬ್ಬ ಶಿಕ್ಷಕನ ಬಂಧನ 

khushihost
ಶಿಕ್ಷಕರ ನೇಮಕಾತಿ ಹಗರಣ : ಮತ್ತೊಬ್ಬ ಶಿಕ್ಷಕನ ಬಂಧನ 

ಬೆಂಗಳೂರು : ಶಿಕ್ಷಕರ ಅಕ್ರಮ ನೇಮಕಾತಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೋರ್ವ ಶಿಕ್ಷಕನನ್ನು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಬೈರವಾಡಗಿ ಪ್ರೌಢ ಶಾಲೆಯ ಶಿಕ್ಷಕ ಅಶೋಕ ಚೌವ್ಹಾಣ ಅವರು ಅಕ್ರಮವಾಗಿ ಶಿಕ್ಷಕ ಹುದ್ದೆಗೆ ಬಂದಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಸಿಐಡಿ ಅಧಿಕಾರಿಗಳು ಅಶೋಕ ಚೌವ್ಹಾಣನನ್ನು ಬಂಧಿಸಿದ್ದಾರೆ.

ಬಂಧಿತ ಶಿಕ್ಷಕ ಅಶೋಕ ಚೌವ್ಹಾಣ ಮೊದಲು ಚಿತ್ರದುರ್ಗ ಜಿಲ್ಲೆಯ ಜಗಳೂರಿನಲ್ಲಿ ಸೇವೆ ಸಲ್ಲಿಸಿದ್ದ. ಬಳಿಕ ವಿಜಯಪುರ ಜಿಲ್ಲೆಗೆ ವರ್ಗವಾಗಿ ಬಂದಿದ್ದ. ಶಿಕ್ಷಕರ ನೇಮಕಾತಿ ಹಗರಣದ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಈವರೆಗೆ ಮೂವರನ್ನು ಬಂಧಿಸಿದೆ.

Share This Article