ಕಳ್ಳತನಕ್ಕೆ ಬಂದ ಬಾಗಲಕೋಟ ಮೂಲದ ಕಳ್ಳನಿಗೆ ಮನೆ ಮಾಲೀಕನಿಂದ ಗುಂಡೇಟು

khushihost
ಕಳ್ಳತನಕ್ಕೆ ಬಂದ ಬಾಗಲಕೋಟ ಮೂಲದ ಕಳ್ಳನಿಗೆ ಮನೆ ಮಾಲೀಕನಿಂದ ಗುಂಡೇಟು

ಬೆಂಗಳೂರು: ಕಳ್ಳತನಕ್ಕೆ ಬಂದಿದ್ದ ಬಾಗಲಕೋಟದ ಕಳ್ಳನ ಮೇಲೆ ಮನೆ ಮಾಲೀಕ ಗುಂಡು ಹಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಇಂದು ಬೆಳಗಿನ ಜಾವ 2:30ರ ಸುಮಾರಿಗೆ ಈ ಘಟನೆ ನಡೆದಿದೆ. ಮನೆ ಮಾಲೀಕ ಕಳ್ಳನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕಳ್ಳ ಗುಂಡೇಟಿನಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟ ಮೂಲದ ಲಕ್ಷ್ಮಣ ಎಂಬವ ಗುಂಡೇಟು ತಗುಲಿ ಗಾಯಗೊಂಡಿರುವ ಆರೋಪಿ. ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article