ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

khushihost
ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಹುಬ್ಬಳ್ಳಿ: ಸಂತೋಷ ಮುರಗೋಡ ಎಂಬಾತನ ಹೊಟ್ಟೆಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹಳೇ ಹುಬ್ಬಳ್ಳಿಯ ದುರ್ಗದಬೈಲ್ ಸರ್ಕಲ್ ಬಳಿ ನಡೆದಿದೆ.

ಸಂತೋಷ ಹಾಗೂ ರೌಡಿಶೀಟರ್ ಜಂಗ್ಲಿಪೇಟ್ ಶಿವನ ನಡುವೆ ವೈಷಮ್ಯವಿತ್ತು. ಶಿವ ತನ್ನ ಸಹಚರನ ಜೊತೆ ಸೇರಿಕೊಂಡು ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಮಾಹಿತಿ ತಿಳಿದ ಕಸಬಾಪೇಟೆ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ಮಾಹಿತಿ ಪಡೆದಿದ್ದು ತನಿಖೆ ನಡೆಯುತ್ತಿದೆ.

Share This Article