ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

khushihost
ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಳಗಾವಿ : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಇಮೇಲ್ ಮೂಲಕ ಅಪರಿಚಿತರು ವಿಮಾನ ನಿಲ್ದಾಣ ಸ್ಪೋಟಿಸುವ ಬೆದರಿಕೆ ಹಾಕಿದ್ದು, ಇದು ಹುಸಿಯಾಗಿರಬಹುದು ಎಂಬ ಸಂದೇಹವೂ ಇದೆ.

ಸಾಂಬ್ರಾ ‌ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಈ ಬೆದರಿಕೆ ಪತ್ರ ಬಂದಿದೆ.

ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಾಂಬ್ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ.
ಶ್ವಾನದಳ, ಬಾಂಬ್ ಸ್ಕಾಡ್‌ನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಮಾಡಲಾಗಿದೆ.

ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ತ್ಯಾಗರಾಜ್ ಅವರು ಈ ಬಗ್ಗೆ ಪೊಲೀಸರಿಗೆ ಅಗತ್ಯ ಮಾಹಿತಿ ನೀಡಿದ್ದಾರೆ.

Share This Article