ಸುಪ್ರೀಮ ಕೋರ್ಟ ಮೆಟ್ಟಿಲೇರಿದ ಚಾಮರಾಜಪೇಟೆ ಈದ್ಗಾ ಮೈದಾನ  ವಿವಾದ

khushihost
ಸುಪ್ರೀಮ ಕೋರ್ಟ ಮೆಟ್ಟಿಲೇರಿದ ಚಾಮರಾಜಪೇಟೆ ಈದ್ಗಾ ಮೈದಾನ  ವಿವಾದ

ಹೊಸದಿಲ್ಲಿ: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವುದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ ಬೋರ್ಡ ಸುಪ್ರೀಮ ಕೋರ್ಟ‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆ ಮಂಗಳವಾರ ನಡೆಸಲು ಸುಪ್ರೀಮ ಕೋರ್ಟ ಸಮ್ಮತಿಸಿದೆ.

ಈ ನಡುವೆ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ರಾಜ್ಯ ಹೈಕೋರ್ಟ ಅನುಮತಿ ನೀಡಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗೆ ಅಡ್ಡಿಯಿಲ್ಲ ಎಂದಿದೆ.

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ, ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

Share This Article