ವೋಟರ್ ಐಡಿ ಅಕ್ರಮದ ಸಮಗ್ರ ತನಿಖೆ -ಮುಖ್ಯಮಂತ್ರಿ

khushihost
ವೋಟರ್ ಐಡಿ ಅಕ್ರಮದ ಸಮಗ್ರ ತನಿಖೆ -ಮುಖ್ಯಮಂತ್ರಿ

ಬೆಂಗಳೂರು: ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಬೊಮ್ಮಾಯಿ, ವೋಟರ್ ಐಡಿ ಅಕ್ರಮದ ಬಗ್ಗೆ ಸಮಗ್ರ ತನಿಖೆಗೆ ಸೂಚಿಸುತ್ತೇನೆ. ಕಾಂಗ್ರೆಸ್ ನಾಯಕರು ದೂರು ನೀಡಿದರೆ ಸಮಗ್ರ ತನಿಖೆ ನಡೆಸಲಾಗುವುದು ಎಂದರು.

ಕಾಂಗ್ರೆಸ್ ನಾಯಕರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.

Share This Article