ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವಂತೆ ರಾಜ್ಯದ ಸಂಸದರಿಗೆ ಮುಖ್ಯಮಂತ್ರಿ ಸೂಚನೆ

khushihost
ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವಂತೆ ರಾಜ್ಯದ ಸಂಸದರಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಂಸದರು ಹಾಗೂ ಸಚಿವರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿರುವ ನಂತರ ಈಗ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚೆತ್ತಿದ್ದು ರಾಜ್ಯದ ಎಲ್ಲಾ ಸಂಸದರು ಕೇಂದ್ರ ಗೃಹ ಸಚಿವ ಅಮಿತ ಶಾ ಅವರನ್ನು ಭೇಟಿಯಾಗುವಂತೆ ತಿಳಿಸಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸೋಮವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವ ಅಮಿತ ಶಾ ಅವರನ್ನು ಭೇಟಿ ಮಾಡಲು ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ ಎಂದು ಹೆಳಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ‌. ಈ ಪ್ರಕರಣ ಸುಪ್ರೀಂ  ಕೋರ್ಟನಲ್ಲಿದೆ. ಸುಪ್ರೀಮ ಕೋರ್ಟ ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

Share This Article