ದಕ್ಷಿಣ ಕನ್ನಡ : ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಯಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರತಿಭಟನೆಯ ವೇಳೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇತ್ತ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಇತ್ತ ಸಿಎಂ ಬೊಮ್ಮಾಯಿ ಹಿನ್ನಲೆಯಲ್ಲಿ ಮಹತ್ವದ ಸಭೆಯನ್ನು ತುರ್ತಾಗಿ ಕರೆದಿದ್ದಾರೆ. ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದೀಗ ಬೆಳ್ಳಾರೆ ಬೂದಿ ಮುಚ್ಚಿದಂತ ಕೆಂಡವಾಗಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಸಿಎಂ ಸಭೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಪೊಲೀಸ್ ಇಲಾಖೆಯ ವರಿಷ್ಠರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.